WCD Kodagu Anganwadi Recruitment 2023 – Apply for 55 Anganwadi Worker And Helper Posts

WCD Kodagu Anganwadi Recruitment 2023 : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೊಡಗು ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯವಿರುವ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

WCD Kodagu Anganwadi Recruitment 2023 : Details of Vacancies

ಹುದ್ದೆ : ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕಿಯರು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 55 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆಯರು17
ಅಂಗನವಾಡಿ ಸಹಾಯಕಿಯರು38

ಕರ್ತವ್ಯ ಸ್ಥಳ : ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆಯಲ್ಲಿ ಹುದ್ದೆಗಳು ಖಾಲಿ ಇದೆ.

ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಅಂಗನವಾಡಿ ಕಾರ್ಯಕರ್ತೆಯರು – ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು.
• ಅಂಗನವಾಡಿ ಸಹಾಯಕಿಯರು – ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿಯಲ್ಲಿ ತೇರ್ಗಡೆ ಹೊಂದಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2022

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 19 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.

ಸಡಿಲಿಕೆ : ಕಾರ್ಯಕರ್ತೆ ಹುದ್ದೆಗೆ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿ ಇರುವ ಕೊಡಗು ಜಿಲ್ಲೆಯ ಆಯಾ ಶಿಶು ಅಭಿವೃದ್ಧಿ ಯೋಜನಾ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 01, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 24, 2023

WCD Kodagu Anganwadi Recruitment 2023 : Important Links

NOTIFICATIONCLICK HERE
Telegram Join Link Click Here

ಇತರೆ ಮಾಹಿತಿ : ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟ ಗ್ರಾಮ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಹುದ್ದೆ ಖಾಲಿ ಇರುವ ಆಯಾ ಶಿಶು ಅಭಿವೃದ್ಧಿ ಯೋಜನಾ ಕಛೇರಿಯನ್ನು ಸಂಪರ್ಕಿಸಬಹುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment