Western Railway Recruitment 2021 | 3591 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Western Railway Recruitment 2021 : ಪಶ್ಚಿಮ ರೈಲ್ವೆಯಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Western Railway Recruitment 2021 : Details of Vacancies

ಹುದ್ದೆ : ಅಪ್ರೆಂಟಿಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3591 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಯೋಮಾನ : ದಿನಾಂಕ 24 ಜೂನ್ 2021ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ : ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 05 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ನೀಡಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಜೊತೆಗೆ ಐಟಿಐ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಮಾಹಿತಿ : Bharatiya Pashupalan Nigam Recruitment 2021 : 4960 ಡೈರಿ ಸಂಯೋಜಕ ಹಾಗೂ ವಿವಿಧ ಹುದ್ದೆಗಳ ಭರ್ತಿ

ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ಧಪಡಿಸಲಾಗುತ್ತದೆ. ಮೆರಿಟ್ ಲಿಸ್ಟ್ ನಲ್ಲಿ ಬಂದ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಪಶ್ಚಿಮ ರೈಲ್ವೆಯಲ್ಲಿ ಖಾಲಿಯಿರುವ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಪಶ್ಚಿಮ ರೈಲ್ವೆ ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100 ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 25, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 24, 2021

Western Railway Recruitment 2021 : Important Links

ಅಧಿಸೂಚನೆ : Click Here

ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.