ಯಾದಗಿರಿ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ 2026 – Yadgiri Gram Panchayat Recruitment 2026

Yadgiri Gram Panchayat Recruitment 2026

Yadgiri Gram Panchayat Recruitment 2026 : ಯಾದಗಿರಿ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Yadgiri Gram Panchayat Recruitment 2026 : Details of Vacancies

ಹುದ್ದೆ :

ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರು

ಕರ್ತವ್ಯ ಸ್ಥಳ :

ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯ ಯಾದಗಿರಿ, ಸುರಪುರ, ಗುರುಮಿಠಕಲ್, ವಡಗೇರಾ, ಹುಣಸಗಿ ತಾಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 12 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮ ಪಂಚಾಯಿತಿ ಹೆಸರುಹುದ್ದೆಗಳ ಸಂಖ್ಯೆ
ವರ್ಕನಳ್ಳಿ1
ಠಾಣಗುಂದಿ1
ಅರಕೇರಾ (ಕೆ ಬಿಜಾಸಪೂರ)1
ಅನಪೂರ1
ವಡಗೇರಾ1
ಮೂದುನೂರ (ಕೆ)1
ಬಂದಳ್ಳಿ1
ಕಿಲ್ಲನಕೇರಾ1
ನಾರಾಯಣಪೂರ1
ಅರಕೇರಾ. ಜೆ1
ಪುಟಪಾಕ1
ರಾಜನಕೊಳ್ಳೂರು1

ಶೈಕ್ಷಣಿಕ ಅರ್ಹತೆ :

ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ 2026

ವಯಸ್ಸಿನ ಮೀತಿ :

ದಿನಾಂಕ 27/07/2026ಕ್ಕೆ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿ ಹೊಂದಿರಬೇಕು.
• ಕನಿಷ್ಠ 18 ವರ್ಷ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ

ಆಯ್ಕೆ ವಿಧಾನ :

ಶೈಕ್ಷಣಿಕ ಅರ್ಹತೆಯಲ್ಲಿನ ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : KREIS ಅಧೀನದ ವಸತಿ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 13, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 27, 2026

Yadgiri Gram Panchayat Recruitment 2026 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಇತರೆ ಮಾಹಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರತಕ್ಕದ್ದು. ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಲಭ್ಯತೆ ಇಲ್ಲದೆ ಇದ್ದಲ್ಲಿ ಆಯಾ ತಾಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿನ ಹತ್ತಿರದ ಗ್ರಾಮ ಪಂಚಾಯತಿಯ ಅಭ್ಯರ್ಥಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment