Yadgiri Village Accountant Recruitment 2022 : ಯಾದಗಿರಿ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Yadgiri Village Accountant Recruitment 2022 : Details of Vacancies
ಹುದ್ದೆ : ಗ್ರಾಮಲೆಕ್ಕಿಗರು
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 27 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಎಲ್ಲಾ ಹುದ್ದೆಗಳು ಹೈದ್ರಾಬಾದ್-ಕರ್ನಾಟಕ ಪ್ರದೇಶದವರಿಗೆ ಮೀಸಲಿರಿಸಿದ ಹುದ್ದೆಗಳಾಗಿವೆ.
ಶೈಕ್ಷಣಿಕ ಅರ್ಹತೆ : ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ ಸೆಂಟ್ರಲ್ ಬೋರ್ಡ್ ಆಪ್ ಸೆಕೆಂಡರಿ ಎಜುಕೇಷನ್ (CBSE) ಅಥವಾ ಐ.ಸಿ.ಎಸ್.ಇ (ICSE) ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಈ ವಿದ್ಯಾರ್ಹತೆಯನ್ನು ಅಧಿಸೂಚನೆ ಹೊರಡಿಸಿರುವ ದಿನಾಂಕಕ್ಕೆ ಮುಂಚಿತವಾಗಿ ಹೊಂದಿರತಕ್ಕದ್ದು. ಈ ವಿದ್ಯಾರ್ಹತೆ ಹೊರತುಪಡಿಸಿ ಇನ್ನಿತರ ಯಾವುದೇ ತತ್ಸಮಾನ ವಿದ್ಯಾರ್ಹತೆಗಳನ್ನು ಪರಿಗಣಿಸಲಾಗುವುದಿಲ್ಲ.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ದ್ವಿತೀಯ ಪಿ.ಯು.ಸಿ. ಪರೀಕ್ಷೆ ಅಥವಾ CBSE ಅಥವಾ ICSE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಅಂಕಗಳ (On Merit) ಆಧಾರದ ಮೇಲೆ ಆಯಾ ಮೀಸಲಾತಿ ಪ್ರವರ್ಗಕ್ಕೆ ಸಂಬಂಧಿಸಿದಂತೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022
ಯಾದಗಿರಿ ಕಂದಾಯ ಘಟಕದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು
ನಿಗದಿತ ಅರ್ಜಿ ಶುಲ್ಕದ ವಿವರ :
• ಪ.ಜಾತಿ/ಪ.ಪಂ/ಪ್ರ1/ಅಂಗವಿಕಲ ಅಭ್ಯರ್ಥಿಗಳು ರೂ. 25
• 2ಎ,2ಬಿ,3ಎ,3ಬಿ, ಮಾಜಿ ಸೈನಿಕ ಅಭ್ಯರ್ಥಿಗಳು ರೂ. 150
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಪ್ರಿಂಟ್ ತೆಗೆದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 31, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 29, 2022
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 05, 2022
Yadgiri Village Accountant Recruitment 2022 : Important Links
ಅಧಿಸೂಚನೆ | Click Here |
ಅರ್ಜಿ ಸಲ್ಲಿಸಿ | Click Here |
1:5 Shortlisted Candidates List | Click Here |
ಇತರೆ ಮಾಹಿತಿ : ಹೈದ್ರಾಬಾದ್-ಕರ್ನಾಟಕ ಪ್ರದೇಶದವರಲ್ಲದ ಅಭ್ಯರ್ಥಿಗಳು ಹೈದ್ರಾಬಾದ್ ಕರ್ನಾಟಕ ಪ್ರದೇಶಕ್ಕೆ ಮೀಸಲಿರಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.