ಚಾಮರಾಜನಗರ ಜಿಲ್ಲಾ ಪಂಚಾಯತ್ ನೇಮಕಾತಿ 2020 | ಕರ್ನಾಟಕ ಜಾಬ್ ಇನ್ಫೋಗೆ ಸ್ವಾಗತ | ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲಾ ವ್ಯಾಪ್ತಿಯಲ್ಲಿ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅನುಭವ, ಮಾಸಿಕ ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
ನರೇಗಾ ಲೆಕ್ಕ ವ್ಯವಸ್ಥಾಪಕರು
ತಾಲ್ಲೂಕು ಎಂ.ಐ.ಎಸ್ ಸಂಯೋಜಕರು
ತಾಲ್ಲೂಕು ಐ.ಇ.ಸಿ ಸಂಯೋಜಕರು
ತಾಂತ್ರಿಕ ಸಂಯೋಜಕರು
ಕರ್ತವ್ಯ ಸ್ಥಳ :
ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು
ಹುದ್ದೆಯ ವಿಧ :
ಹೊರಗುತ್ತಿಗೆ ಆಧಾರದ ಮೇಲೆ ನೇಮಕ
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಜಿಲ್ಲಾ ಪಂಚಾಯತ್ ನಲ್ಲಿ ಅಗತ್ಯವಿರುವ ಒಟ್ಟು 04 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಹುದ್ದೆ | ಮಾಸಿಕ ವೇತನ | ಶೈಕ್ಷಣಿಕ ಅರ್ಹತೆ |
ನರೇಗಾ ಲೆಕ್ಕ ವ್ಯವಸ್ಥಾಪಕರು | ರೂ. 30,000 | M.Com / MBA |
ತಾಲ್ಲೂಕು ಎಂ.ಐ.ಎಸ್ ಸಂಯೋಜಕರು | ರೂ. 18,000 | BE / B. Sc (Computer Science) |
ತಾಲ್ಲೂಕು ಐ.ಇ.ಸಿ ಸಂಯೋಜಕರು | ರೂ. 18,000 | MA (Mass Communication) |
ತಾಂತ್ರಿಕ ಸಂಯೋಜಕರು | ರೂ. 27,000 | BE (Civil) |
ವಯೋಮಾನ :
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಅನುಭವ :
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ ಎರಡು ವರ್ಷಗಳ ಸಂಬಂಧಿತ ಅನುಭವ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕೆ.ಎಸ್.ಸಿ.ಎಸ್.ಟಿಯಲ್ಲಿ ಎಸ್.ಡಿ.ಎ, ಎಫ್.ಡಿ.ಎ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳ ಭರ್ತಿ
ಆಯ್ಕೆ ಪ್ರಕ್ರಿಯೆ :
ಇಲಾಖೆಯ ಮಾನದಂಡಗಳ ಪ್ರಕಾರ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ :
• ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು
• ಅಭ್ಯರ್ಥಿಗಳು ಚಾಮರಾಜನಗರ ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ಸೈಟ್ https://chamrajnagar.nic.in/en/recruitments/ ವಿಳಾಸಕ್ಕೆ ಭೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಲಾಖೆಯು ಯಾವುದೇ ಅರ್ಜಿ ಶುಲ್ಕ ನಿಗದಿಪಡಿಸಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಅಕ್ಟೋಬರ್ 06, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 20, 2020
ಅಧಿಸೂಚನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.