Zilla Panchayat Recruitment 2021 : 295 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Zilla Panchayat Recruitment 2021 : ಕರ್ನಾಟಕದ ವಿವಿಧ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Zilla Panchayat Recruitment 2021 : Details of Vacancies

ಹುದ್ದೆ : ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ಎಂ.ಐ.ಎಸ್ ಅಸಿಸ್ಟೆಂಟ್ ಕಮ್ ಡಿಇಓ, ಜಿಲ್ಲಾ ಪ್ರೋಗ್ರಾಮ್ ಮ್ಯಾನೇಜರ್, ತಾಲ್ಲೂಕು ಪ್ರೋಗ್ರಾಮ್ ಮ್ಯಾನೇಜರ್, ಕ್ಲಸ್ಟರ್ ಸೂಪರ್ವೈಸರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ವಿವಿಧ ಜಿಲ್ಲಾ ಪಂಚಾಯತಿಯಲ್ಲಿ ಅಗತ್ಯ ಇರುವ 295 ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ/ ಸ್ನಾತಕೋತ್ತರ ಪದವೀಧರರಾಗಿದ್ದು, ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಹಾಗೂ ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಓದಲು, ಬರೆಯಲು, ಮಾತನಾಡಲು ಬರಬೇಕು.

ಅನುಭವ : ಅಭ್ಯರ್ಥಿಗಳು ಕನಿಷ್ಠ 2-5 ವರ್ಷ ಸಂಬಂಧಿಸಿದ ಕ್ಷೇತ್ರದಲ್ಲಿ ಅನುಭವ ಹೊಂದಿರಬೇಕು.

ಉದ್ಯೋಗ ಮಾಹಿತಿ : ಕೆನರಾ ಬ್ಯಾಂಕಿನಲ್ಲಿ ಜ್ಯೂವೆಲ್ ಅಪ್ಫ್ರೈಸರ್ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 18,000 ರಿಂದ ರೂ. 30,000 ವರೆಗೂ ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅರ್ಜಿ ಸಲ್ಲಿಸಿದ ಒಟ್ಟು ಅಭ್ಯರ್ಥಿಗಳಲ್ಲಿ ಖಾಲಿ ಹುದ್ದೆಗಳಿಗೆ ಅನುಗುಣವಾಗಿ 1:3 ಮೌಖಿಕ ಸಂದರ್ಶನದ ನಡೆಸಿ ಆಯ್ಕೆ ಮಾಡಿಕೊಳ್ಳಲಾಗುವುದು.

ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 15, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 04, 2021

Zilla Panchayat Recruitment 2021 : Important Links

ಅಧಿಸೂಚನೆ & ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.