ಐಬಿಪಿಎಸ್ ನೇಮಕಾತಿ 2020 | ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್) ವಿವಿಧ ಬ್ಯಾಂಕುಗಳಲ್ಲಿ ಅಗತ್ಯವಿರುವ ಕ್ಲರ್ಕ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
ಕ್ಲರ್ಕ್ (CRP Clerk X)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು ಒಟ್ಟು 1556 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆದಿದೆ.
ಹುದ್ದೆ ಖಾಲಿಯಿರುವ ಬ್ಯಾಂಕುಗಳು :
ಬ್ಯಾಂಕ್ ಆಫ್ ಬರೋಡ, ಕೆನರಾ ಬ್ಯಾಂಕ್, ಇಂಡಿಯನ್ ಓವರ್ಸೀಸ್ ಬ್ಯಾಂಕ್, ಯುಸಿಓ ಬ್ಯಾಂಕ್, ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಮಹಾರಾಷ್ಟ್ರ, ಇಂಡಿಯನ್ ಬ್ಯಾಂಕ್
ಹುದ್ದೆಗೆ ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಿರಬೇಕು.
ಉದ್ಯೋಗ ಮಾಹಿತಿ : ಕಿಮ್ಸ್ ಕಾರವಾರ ನೇಮಕಾತಿ 2020
ನಿಗದಿಪಡಿಸಲಾದ ಮಾಸಿಕ ವೇತನ :
ಸಂಸ್ಥೆಯ ಮಾನದಂಡಗಳ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ನಿಗದಿತ ವೇತನ ನೀಡಲಾಗುವುದು.
ವಯೋಮಾನ :
ಅಭ್ಯರ್ಥಿಗಳ ಕನಿಷ್ಠ ವಯೋಮಾನ 20 ವರ್ಷ ಹಾಗೂ ಗರಿಷ್ಠ ವಯೋಮಾನ 28 ವರ್ಷ ನಿಗದಿಪಡಿಸಲಾಗಿದೆ (ದಿನಾಂಕ 01/09/2020 ಕ್ಕೆ)
ವಯೋಮಾನ ಸಡಿಲಿಕೆ :
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 05 ವರ್ಷ,
ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ,
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ ಹಾಗೂ ಮುಖ್ಯ ಪರೀಕ್ಷೆ ನಡೆಸಿ ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಮಾಡಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಐಬಿಪಿಎಸ್ ಕ್ಲರ್ಕ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯ ಅಧಿಕೃತ ವೆಬ್ಸೈಟ್ www.ibps.in ವಿಳಾಸಕ್ಕೆ ಭೇಟಿ ನೀಡಿ, ಆನ್ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳು ರೂ. 850 ಪಾವತಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ರೂ. 175 ಪಾವತಿಸಬೇಕು.
ಅರ್ಜಿ ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಹಾಗೂ ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 02, 2020 ಅಕ್ಟೋಬರ್ 23, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 23, 2020 ನವೆಂಬರ್ 06, 2020
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 23, 2020 ನವೆಂಬರ್ 06, 2020
ಅಧಿಸೂಚನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.