ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗಾವಕಾಶ | ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ಹುದ್ದೆ :
ಶೀಘ್ರಲಿಪಿಗಾರರು
ಬೆರಳಚ್ಚುಗಾರರು
ಬೆರಳಚ್ಚು ನಕಲುಗಾರರು
ಆದೇಶ ಜಾರಿಕಾರರು
ಜವಾನರು

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 56 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಶೀಘ್ರಲಿಪಿಗಾರರು08ರೂ. 27,650 ~ ರೂ. 52,650
ಬೆರಳಚ್ಚುಗಾರರು01ರೂ. 21,400 ~ ರೂ. 42,000
ಬೆರಳಚ್ಚು ನಕಲುಗಾರರು01ರೂ. 21,400 ~ ರೂ. 42,000
ಆದೇಶ ಜಾರಿಕಾರರು02ರೂ. 19,950 ~ ರೂ. 37,900
ಜವಾನರು44ರೂ. 17,000 ~ ರೂ. 28,950

ವಯೋಮಾನ :
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಾನ ನಿಗದಿಪಡಿಸಲಾಗಿದೆ. ಹಾಗೂ
ಸಾಮಾನ್ಯ ವರ್ಗ – ಗರಿಷ್ಠ 35 ವರ್ಷ
ಒಬಿಸಿ ಅಭ್ಯರ್ಥಿಗಳು – ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 – ಗರಿಷ್ಠ 40 ವರ್ಷ

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಜೊತೆಗೆ
ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿನ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಗೃಹರಕ್ಷಕರ ಹುದ್ದೆಗಳ ನೇಮಕಾತಿ 2020 

ಆಯ್ಕೆ ವಿಧಾನ :
ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನದಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಮಾಡುವ ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
(ಆದೇಶ ಜಾರಿಕಾರ ಹಾಗೂ ಜವಾನ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು)

ಕಲಬುರಗಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕಲಬುರಗಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ https://district.ecourts.gov.in/kalaburagi ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200 ಪಾವತಿಸಬೇಕು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 28, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 31, 2020

ಅಧಿಸೂಚನೆ(ಶೀಘ್ರಲಿಪಿಗಾರ) : Click Here
ಅಧಿಸೂಚನೆ(ಬೆರಳಚ್ಚುಗಾರ) : Click Here
ಅಧಿಸೂಚನೆ(ಬೆರಳಚ್ಚು ನಕಲುಗಾರ) : Click Here
ಅಧಿಸೂಚನೆ(ಆದೇಶ ಜಾರಿಕಾರ) : Click Here
ಅಧಿಸೂಚನೆ(ಜವಾನರು) : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook