ಗೃಹರಕ್ಷಕರ ಹುದ್ದೆಗಳ ನೇಮಕಾತಿ 2020 | ಕೋಲಾರ ಜಿಲ್ಲೆಯಲ್ಲಿ ಖಾಲಿಯಿರುವ ಗೃಹರಕ್ಷಕರ ಹಾಗೂ ಗೃಹರಕ್ಷಕಿಯರ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
ಹುದ್ದೆ :
ಸ್ವಯಂ ಸೇವಾ ಗೃಹರಕ್ಷಕ / ಗೃಹರಕ್ಷಕಿಯರು
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಕೋಲಾರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 330 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವೇತನ :
ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ಗೌರವಧನವಾಗಿ ದಿನವೊಂದಕ್ಕೆ ರೂ. 750, ಅನ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ದಿನವೊಂದಕ್ಕೆ ರೂ. 380 ಹಾಗೂ ಬೆಂಗಳೂರಿನ ಅನ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ ದಿನವೊಂದಕ್ಕೆ ರೂ. 455 ನೀಡಲಾಗುತ್ತದೆ
ವಯೋಮಾನ :
ಅಭ್ಯರ್ಥಿಗಳಿಗೆ ಕನಿಷ್ಠ 19 ವರ್ಷ ಹಾಗೂ ಗರಿಷ್ಠ 50 ವರ್ಷ ನಿಗದಿಪಡಿಸಲಾಗಿದೆ
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಉದ್ಯೋಗ ಮಾಹಿತಿ : ಕೆನರಾ ಬ್ಯಾಂಕ್ ನೇಮಕಾತಿ 2020
ಗೃಹರಕ್ಷಕರ ಹಾಗೂ ಗೃಹರಕ್ಷಕಿಯರ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಕಛೇರಿಯ ಸಮಯದಲ್ಲಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ www.kolarpolice.com ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಜನನ ಸ್ಥಳ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು. ಅಥವಾ ಕಛೇರಿಯ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು ನಂತರ ಅದನ್ನು ಭರ್ತಿ ಮಾಡಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಜಿಲ್ಲಾ ಗೃಹರಕ್ಷಕದಳದ ಕಛೇರಿ,
ಕೋಲಾರ ಟಮಕ ಕೈಗಾರಿಕಾ ಪ್ರಾಂಗಣದ ಹತ್ತಿರ, ಕೋಲಾರ
ನಿಗದಿತ ಅರ್ಜಿ ಶುಲ್ಕದ ವಿವರ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ದೇಹದಾರ್ಢ್ಯತೆ :
ಪುರುಷ | ಮಹಿಳೆ | |
ಎತ್ತರ | 168 ಸೆ.ಮೀ | 157 ಸೆ.ಮೀ |
ತೂಕ | 50 ಕೆ.ಜಿಯ ಮೇಲೆ | 45 ಕೆ.ಜಿಯ ಮೇಲೆ |
ಎದೆ ಸುತ್ತಳತೆ | 81-86 | ಅನ್ವಯಿಸುವುದಿಲ್ಲ |
ಇತರೆ ಮಾಹಿತಿ :
ಗೃಹರಕ್ಷಕ ದಳದ ಸಂಸ್ಥೆಯು ಒಂದು ಸ್ವಯಂ ಸೇವಾ ಸಂಸ್ಥೆಯಾಗಿರುತ್ತದೆ. ಈ ಸಂಸ್ಥೆಯಲ್ಲಿ ಮೂರು ವರ್ಷಗಳ ಅವಧಿಗೆ ಮಾತ್ರ ಸೇವೆ ಸಲ್ಲಿಸಬಹುದಾಗಿದ್ದು, ಇದು ಖಾಯಂ ನೌಕರಿಯಾಗಿರುವುದಿಲ್ಲ.
ಕಂಪ್ಯೂಟರ್ ಹಾಗೂ ಡ್ರೈವಿಂಗ್ ಪರವಾನಗಿ ಹೊಂದಿರುವ ಅಭ್ಯರ್ಥಿಗಳಿಗೆ ಆಯ್ಕೆಯಲ್ಲಿ ಮೊದಲ ಆದ್ಯತೆ ನೀಡಲಾಗುವುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 23, 2020
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 05, 2020
ಅಧಿಸೂಚನೆ : Click Here
ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.